Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:13
27 ತಿಳಿವುಗಳ ಹೋಲಿಕೆ  

“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.


ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.


ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.


ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.


ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.


ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


“‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.


ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.


ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು