Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಪುರುಷನು ಒಳಗಿನ ಮಂದಿರವನ್ನು ಅಳೆದ ನಂತರ ನನ್ನನ್ನು ಪೂರ್ವಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರೆದುತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಪುರುಷನು ಒಳಗಣ ಮಂದಿರವನ್ನು ಅಳೆದುಬಿಟ್ಟ ನಂತರ ನನ್ನನ್ನು ಮೂಡಣ ಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಲಯದ ಒಳಭಾಗದ ಅಳತೆಯನ್ನು ಅವನು ತೆಗೆದುಕೊಂಡ ಬಳಿಕ ನನ್ನನ್ನು ಪೂರ್ವದ ದ್ವಾರದಿಂದ ಹೊರತಂದು ಆ ಜಾಗವನ್ನೆಲ್ಲಾ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:15
7 ತಿಳಿವುಗಳ ಹೋಲಿಕೆ  

ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.


ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.


ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.


ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.


ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು