Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಆ ಪುರುಷ ನನ್ನನ್ನು ಪೂರ್ವದ ಬಾಗಿಲಿಗೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಆತನು ನನ್ನನ್ನು ಮೂಡಣ ಬಾಗಿಲಿಗೆ ಬರಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಮನುಷ್ಯನು ನನ್ನನ್ನು ಪೂರ್ವದ ದ್ವಾರಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:1
7 ತಿಳಿವುಗಳ ಹೋಲಿಕೆ  

ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.


ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.


ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.


ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು