Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:18
10 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,


ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು