Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:19
22 ತಿಳಿವುಗಳ ಹೋಲಿಕೆ  

“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.


ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು