Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:20
18 ತಿಳಿವುಗಳ ಹೋಲಿಕೆ  

ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.


ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.


“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು


ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.


ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.


ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.


ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.


ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.


ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು