Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಹೊಸ್ತಲುನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವದರಿಂದಲೂ ಇನ್ನು ನನ್ನ ಪವಿತ್ರನಾಮವನ್ನು ಹೊಲೆಗೆಡಿಸರು; ಆಹಾ, ತಾವು ನಡಿಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:8
13 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.


ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.


ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,


ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು