ಯೆಹೆಜ್ಕೇಲನು 44:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ [ಸಮಾಧಾನ] ಯಜ್ಞಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು. ಅಧ್ಯಾಯವನ್ನು ನೋಡಿ |