ಯೆಹೆಜ್ಕೇಲನು 44:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |