ಯೆಹೆಜ್ಕೇಲನು 44:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ‘ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆದ್ದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅವಮಾನಿತರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಅಧ್ಯಾಯವನ್ನು ನೋಡಿ |