Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:7
38 ತಿಳಿವುಗಳ ಹೋಲಿಕೆ  

ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.


ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.


ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.


ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು