Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದು ಕೋರ್ ಆಲೀವ್ ಎಣ್ಣೆಗೆ 1/10 ಬತ್ ಆಲಿವ್ ಎಣ್ಣೆಯನ್ನು ಕೊಡಬೇಕು; ಹತ್ತು ಬತ್ ಅಂದರೆ ಒಂದು ಹೋಮೆರ್, ಹತ್ತು ಬತ್ ಅಂದರೆ ಒಂದು ಕೋರ್ ಎಂಬುದನ್ನು ಜ್ಞಾಪಕದಲ್ಲಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಎಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ, ಒಂದು ಕೋರ್ ಅಂದರೆ, ಹತ್ತು ಬಾತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬಾತ್ ಅಳತೆಯ ಹತ್ತನೆಯ ಒಂದು ಪಾಲು; ಏಕೆಂದರೆ ಹತ್ತು ಬಾತ್ ಒಂದೇ ಓಮೆರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:14
4 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.


ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.


ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.


ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು