Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:15
15 ತಿಳಿವುಗಳ ಹೋಲಿಕೆ  

ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು