ಯೆಹೆಜ್ಕೇಲನು 45:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು. ಅಧ್ಯಾಯವನ್ನು ನೋಡಿ |