Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದರಲ್ಲಿ 250 ಮೀಟರ್ ಉದ್ದದ, 250 ಮೀಟರ್ ಅಗಲದ ಚಚ್ಚೌಕವಾದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವುದು; ಅದರ ಸುತ್ತ ಇಪ್ಪತ್ತೈದು ಮೀಟರ್ ಅಗಲ ಉಳದ ಭೂಮಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದರಲ್ಲಿ ಐನೂರು ಮೊಳ ಉದ್ದದ ಐನೂರು ಮೊಳ ಅಗಲದ ಚಚ್ಚೌಕದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವದು; ಅದರ ಸುತ್ತ ಐವತ್ತು ಮೊಳ ಅಗಲ ಉಳದ ಭೂವಿು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಧಿಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:2
6 ತಿಳಿವುಗಳ ಹೋಲಿಕೆ  

ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.


ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.


ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು