Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದು ದೇಶದಲ್ಲಿ ಪರಿಶುದ್ಧ ಭಾಗ; ಇದು ಪವಿತ್ರಾಲಯದ ಅರ್ಚಕರೂ ಯೆಹೋವನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:4
10 ತಿಳಿವುಗಳ ಹೋಲಿಕೆ  

ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.


ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


“ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.


ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.


ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು