ಯೆಹೆಜ್ಕೇಲನು 45:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
7 ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
7 ರಾಜನ ಸೊತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಗೂ ಉಭಯ ಪಾರ್ಶ್ವಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಪಶ್ಚಿಮದಲ್ಲಿ ಅದು ಪಶ್ಚಿಮ ಕಡೆಗೆ ಹರಡುವುದು. ಪೂರ್ವದಲ್ಲಿ ಪೂರ್ವದ ಕಡೆಗೆ ಹರಡುವುದು. ಅದರ ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಒಂದು ಕುಲದ ಸೊತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
7 ಅಧಿಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವ ಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಧಿಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಧಿಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ.
7 “ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.
ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.