Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಾಜನು ಉತ್ಸವಗಳಲ್ಲೂ ಹಬ್ಬಗಳಲ್ಲೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಸಾಧ್ಯವಿದ್ದಷ್ಟು ಸೇರು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಪ್ರಭುವು] ಉತ್ಸವಗಳಲ್ಲಿಯೂ ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಹಬ್ಬದ ದಿವಸಗಳಲ್ಲಿ ಮತ್ತು ಬೇರೆ ವಿಶೇಷ ದಿವಸಗಳಲ್ಲಿ ಪ್ರತಿ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಯನ್ನು ಸಮರ್ಪಿಸಬೇಕು. ಮತ್ತು ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನ್ನು ಸಮರ್ಪಿಸಬೇಕು. ಕುರಿಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:11
8 ತಿಳಿವುಗಳ ಹೋಲಿಕೆ  

ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು