12 “ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.
12 “ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.
ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.
ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.
ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.
“‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”
“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.