Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಪ್ರಭುವು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನಮಾಡಿದರೆ ಅದು ತಂದೆಯ ಸ್ವಾಸ್ತ್ಯವಾದ ಕಾರಣ ಮಕ್ಕಳಿಗೆ ಹಕ್ಕುಬರುವದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಒಬ್ಬ ರಾಜನು ತನ್ನ ಗಂಡುಮಕ್ಕಳಿಗೆ ತನ್ನ ಭೂಮಿಯ ಭಾಗವನ್ನು ಉಚಿತವಾಗಿ ಕೊಟ್ಟರೆ ಅದು ಅವನ ಗಂಡುಮಕ್ಕಳಿಗೆ ಸೇರುವದು. ಅದು ಅವರ ಆಸ್ತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:16
10 ತಿಳಿವುಗಳ ಹೋಲಿಕೆ  

ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.


ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು