4 ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.
4 “ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.
4 ಸಬ್ಬತ್‍ದಿನದಲ್ಲಿ ಪ್ರಭುವು ಯೆಹೋವನಿಗೆ ಪೂರ್ಣಾಂಗವಾದ ಆರು ಕುರಿಗಳನ್ನೂ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು;
4 “ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು.
4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.