Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರಾಜನು ಒಂದು ಏಫಾ ಧಾನ್ಯವನ್ನು ಹೋರಿಯೊಂದಿಗೂ ಇನ್ನೊಂದು ಏಫಾ ಧಾನ್ಯವನ್ನು ಟಗರಿನೊಂದಿಗೂ ಕೊಡಬೇಕು. ಆದರೆ ಅಧಿಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯಸಮರ್ಪಣೆಯನ್ನು ಕೊಡಬಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:7
6 ತಿಳಿವುಗಳ ಹೋಲಿಕೆ  

ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.


“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.


ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು