ಯೆಹೆಜ್ಕೇಲನು 47:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು. ಅಧ್ಯಾಯವನ್ನು ನೋಡಿ |