Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿವಿುನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:10
21 ತಿಳಿವುಗಳ ಹೋಲಿಕೆ  

ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,


ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.


ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.


ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.


“ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.


ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’


ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.


ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.


ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.


ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.


ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು