ಯೆಹೆಜ್ಕೇಲನು 47:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.” ಅಧ್ಯಾಯವನ್ನು ನೋಡಿ |