ಯೆಹೆಜ್ಕೇಲನು 47:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ. ಅಧ್ಯಾಯವನ್ನು ನೋಡಿ |