Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:19
15 ತಿಳಿವುಗಳ ಹೋಲಿಕೆ  

ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.


ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.


ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.


ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.


“ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.


ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು