ಯೆಹೆಜ್ಕೇಲನು 47:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಅವನು ನನ್ನನ್ನು ಬಡಗಣ ಹೆಬ್ಬಾಗಿಲಿಂದ ದೇವಾಲಯದ ಹೊರಗಣ ಮಾರ್ಗವಾಗಿ ಸುತ್ತಿಸಿಕೊಂಡು ಮೂಡಲ ಹೆಬ್ಬಾಗಿಲಿಗೆ ಕರತಂದನು; ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ನನ್ನನ್ನು ಉತ್ತರದ ದ್ವಾರದಿಂದ ಹೊರಕ್ಕೆ ತಂದು, ದೇವಾಲಯದ ಹೊರ ಅಂಚಿನಲ್ಲಿಯೇ ಪೂರ್ವ ದ್ವಾರಕ್ಕೆ ತಂದನು. ಆ ದ್ವಾರದ ದಕ್ಷಿಣದ ಕಡೆಯಿಂದ ನೀರು ಹರಿದು ಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು. ಅಧ್ಯಾಯವನ್ನು ನೋಡಿ |