Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:22
20 ತಿಳಿವುಗಳ ಹೋಲಿಕೆ  

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.


ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.


ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು