ಯೆಹೆಜ್ಕೇಲನು 48:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಹಂಚುವಿಕೆಯನ್ನು ಅನುಸರಿಸಿ] ಕುಲಗಳ ಹೆಸರುಗಳು ಇವೇ; [ದೇಶದ] ಕೇವಲ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಬಡಗಣ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವದು; ಅದರ ಪಾರ್ಶ್ವಗಳು [ದೇಶದ] ಪೂರ್ವಪಶ್ಚಿಮಗಳ [ಎಲ್ಲೆಗಳ] ತನಕ ಚಾಚಿಕೊಂಡಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1-7 “ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ. ಅಧ್ಯಾಯವನ್ನು ನೋಡಿ |