Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರದಲ್ಲಿ ಅದರ ಉದ್ದವು ಹನ್ನೆರಡುವರೆ ಕಿಲೋಮೀಟರ್, ಪಶ್ಚಿಮದಲ್ಲಿ ಅಗಲವು ಐದು ಕಿಲೋಮೀಟರ್, ಪೂರ್ವದಲ್ಲಿ ಅಗಲವು ಐದು ಕಿಲೋಮೀಟರ್, ಉತ್ತರದಲ್ಲಿ ಉದ್ದವು ಹನ್ನೆರಡುವರೆ ಕಿಲೋಮೀಟರ್. ಅದರ ಮಧ್ಯೆ ಸರ್ವೇಶ್ವರನ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು; ಬಡಗಲಲ್ಲಿ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಪಡುವಲಲ್ಲಿ ಅಗಲವು ಹತ್ತು ಸಾವಿರ ಮೊಳ, ಮೂಡಲಲ್ಲಿ ಅಗಲವು ಹತ್ತು ಸಾವಿರ ಮೊಳ, ತೆಂಕಲಲ್ಲಿ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:10
8 ತಿಳಿವುಗಳ ಹೋಲಿಕೆ  

ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.


“ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.


ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.


ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು