ಯೆಹೆಜ್ಕೇಲನು 48:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೀಸಲಾದ ಪೂರ್ಣಕ್ಷೇತ್ರದ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹನ್ನೆರಡುವರೆ ಕಿಲೋಮೀಟರ್; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರ ರಾಜಧಾನಿಗೆ ಒಳಪಟ್ಟ ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೀಸಲಾದ ಪೂರ್ಣಕ್ಷೇತ್ರದ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತೈದು ಸಾವಿರ ಮೊಳ; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರವು ರಾಜಧಾನಿಗೆ ಒಳಪಟ್ಟ ಭೂವಿುಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ವಿಶೇಷವಾದ ಈ ಭೂಪ್ರದೇಶವು ಚೌಕವಾಗಿರುವದು. ಇದರ ಉದ್ದ ಮತ್ತು ಇಪ್ಪತ್ತೈದು ಸಾವಿರ ಮೊಳ ಅಗಲ ಇಪ್ಪತ್ತೈದು ಸಾವಿರ ಮೊಳ. ಈ ಪ್ರದೇಶವನ್ನು ನೀನು ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಬೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನ್ನೊಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.