Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವಾಸ್ತ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಕುಲಗಳ ಪಾಲುಗಳು ಇವೇ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:29
6 ತಿಳಿವುಗಳ ಹೋಲಿಕೆ  

ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು