ಯೆಹೆಜ್ಕೇಲನು 48:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜುದೇಯದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು; ಅದರ ಅಗಲ ಹನ್ನೆರಡುವರೆ ಕಿಲೋಮೀಟರ್, ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೂದದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವದು; ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ, ಉದ್ದವು ಪಡುವಲಿಂದ ಮೂಡಲಿಗೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸ್ವಾಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು. ಅಧ್ಯಾಯವನ್ನು ನೋಡಿ |
ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.