Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:10
36 ತಿಳಿವುಗಳ ಹೋಲಿಕೆ  

ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.


ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


“‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.


ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.


ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು