Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:13
33 ತಿಳಿವುಗಳ ಹೋಲಿಕೆ  

ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”


ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.


ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು