Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇದು ಯೆರೂಸಲೇಮು; ಆ ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:5
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.


ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು