Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:9
7 ತಿಳಿವುಗಳ ಹೋಲಿಕೆ  

ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು