Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನೇ ಯೆಹೋವನೆಂದು ಅವರಿಗೆ ತಿಳಿಯುವುದು. ಈ ಆಪತ್ತನ್ನು ಬರಮಾಡುವೆನು ಎಂದು ನಾನು ಹೇಳಿದ್ದಕ್ಕೆ ಸರಿಯಾದ ಕಾರಣವಿತ್ತೆಂದು ಅವರು ಗ್ರಹಿಸಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನೇ ಯೆಹೋವ ದೇವರೆಂದೂ, ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ, ನಾನು ವ್ಯರ್ಥವಾಗಿ ಹೇಳುವುದಿಲ್ಲವೆಂದೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:10
11 ತಿಳಿವುಗಳ ಹೋಲಿಕೆ  

ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು