Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:12
11 ತಿಳಿವುಗಳ ಹೋಲಿಕೆ  

“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು