Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವುಗಳ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:2
17 ತಿಳಿವುಗಳ ಹೋಲಿಕೆ  

ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.


ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,


“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,


“‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’


ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.


ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,


“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು