Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:6
38 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


“‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.


ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.


ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು