ಯೆಹೆಜ್ಕೇಲನು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು. ಅಧ್ಯಾಯವನ್ನು ನೋಡಿ |