ಯೆಹೆಜ್ಕೇಲನು 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶ್ವರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ. ಅಧ್ಯಾಯವನ್ನು ನೋಡಿ |