Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:12
17 ತಿಳಿವುಗಳ ಹೋಲಿಕೆ  

“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು