Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಾರಿದವನು ಎಷ್ಟು ವರುಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:13
11 ತಿಳಿವುಗಳ ಹೋಲಿಕೆ  

ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.


“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.


ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.


ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.


ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.


“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು