Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:15
9 ತಿಳಿವುಗಳ ಹೋಲಿಕೆ  

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು