Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:22
9 ತಿಳಿವುಗಳ ಹೋಲಿಕೆ  

ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”


ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು