Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಂದು ಸರಪಣಿಯನ್ನು ಮಾಡು; ಏಕಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಬಲಾತ್ಕಾರಪೂರ್ಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:23
29 ತಿಳಿವುಗಳ ಹೋಲಿಕೆ  

ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.


ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.


ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.


ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು