ಯೆಹೆಜ್ಕೇಲನು 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು. ಅಧ್ಯಾಯವನ್ನು ನೋಡಿ |
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.